ಬೆಂಗಳೂರು : ದೇಶದಲ್ಲೇ ಸರ್ಕಾರಿ ವಲಯದ ಬೃಹತ್ ತೈಲ ಹಾಗೂ ನೈಸರ್ಗಿಕ ಅನಿಲ ಉತ್ಪಾದನಾ ಕಂಪನಿಯಾಗಿರುವ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ (ONGC Recruitment 2026) ಖಾಲಿ ಇರುವ 3,047 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)
ಒಟ್ಟು ಹುದ್ದೆಗಳು: 3,047
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 20
ಉದ್ಯೋಗದ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ongcindia.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.


















