ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

August 24, 2026
Share on WhatsappShare on FacebookShare on Twitter

ನವದೆಹಲಿ : ಹಬ್ಬಗಳ ಋತು ಹತ್ತಿರವಾಗುತ್ತಿದ್ದಂತೆಯೇ ಸಕ್ಕರೆ ದರ ಏರಿಕೆಯ ಬೆನ್ನಲ್ಲೇ ಇದೀಗ ದೇಶಾದ್ಯಂತ ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಅಡುಗೆಮನೆಯ ಬಜೆಟ್ ಏರುಪೇರಾಗುವ ಲಕ್ಷಣಗಳು ಕಂಡುಬರುತ್ತಿವೆ. ದೇಶದಲ್ಲಿ ಈಗ ಈರುಳ್ಳಿಯ ಸರಾಸರಿ ಚಿಲ್ಲರೆ ಬೆಲೆ ಕೆಜಿಗೆ 42 ರೂಪಾಯಿಗೆ ತಲುಪಿದ್ದು, ಇದು ಕಳೆದ ವರ್ಷಕ್ಕಿಂತ ಶೇ.45ರಷ್ಟು ಹಾಗೂ ಕಳೆದ ತಿಂಗಳಿಗಿಂತ ಶೇಕಡಾ 19 ರಷ್ಟು ಹೆಚ್ಚಾಗಿದೆ. ದೆಹಲಿಯಲ್ಲಿ ಸದ್ಯ ಈರುಳ್ಳಿ ಬೆಲೆ ಕೆಜಿಗೆ 65 ರೂಪಾಯಿ ಗಡಿ ದಾಟಿದ್ದರೆ, ಚೆನ್ನೈನಲ್ಲಿ 58 ರೂಪಾಯಿಗೆ ಮಾರಾಟವಾಗುತ್ತಿದೆ.

ಹಳೆಯ ದಾಸ್ತಾನು ಖಾಲಿ, ಹೊಸ ಬೆಳೆ ವಿಳಂಬ

ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ವ್ಯತ್ಯಯ ಉಂಟಾಗಲು ವಸಂತ ಋತುವಿನ ಬೆಳೆಯ ದಾಸ್ತಾನು ತೀರುತ್ತಿರುವುದು ಹಾಗೂ ಹೊಸ ಮುಂಗಾರು ಬೆಳೆಯ ಆಗಮನ ವಿಳಂಬವಾಗಿರುವುದೇ ಮುಖ್ಯ ಕಾರಣ ಎನ್ನಲಾಗಿದೆ. ಮಾರ್ಚ್-ಏಪ್ರಿಲ್‌ನಲ್ಲಿ ಕೊಯ್ಲು ಮಾಡಲಾದ ಈರುಳ್ಳಿಯನ್ನು ಶೇಖರಿಸಿಟ್ಟು ಅಕ್ಟೋಬರ್‌ವರೆಗೆ ಮಾರುಕಟ್ಟೆಗೆ ಪೂರೈಸಲಾಗುತ್ತದೆ. ಆದರೆ ಈ ಬಾರಿ ಮಾರ್ಚ್-ಏಪ್ರಿಲ್‌ನಲ್ಲಿ ಮಹಾರಾಷ್ಟ್ರದಲ್ಲಿ ಬಿದ್ದ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಶೇಖರಿಸಿಟ್ಟಿದ್ದ ಈರುಳ್ಳಿ ಗುಣಮಟ್ಟ ಹಾಗೂ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮತ್ತೊಂದೆಡೆ, ಮುಂಗಾರು ತಡವಾದ್ದರಿಂದ ನಾಸಿಕ್ ವಲಯದಲ್ಲಿ ಮುಂಗಾರು ಈರುಳ್ಳಿ ಬಿತ್ತನೆ ವಿಳಂಬಗೊಂಡು ಕೊಯ್ಲು ತಡವಾಗುತ್ತಿದೆ.

ಬೆಲೆ ಶೇ. 118 ರಷ್ಟು ಏರಿಕೆ

ಚಿಲ್ಲರೆ ಮಾರುಕಟ್ಟೆಯಷ್ಟೇ ಅಲ್ಲದೆ ಸಗಟು ಮಾರುಕಟ್ಟೆಯಲ್ಲೂ ಈರುಳ್ಳಿ ಬೆಲೆ ಭಾರಿ ಜಿಗಿತ ಕಂಡಿದೆ. ಕೃಷಿ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕ್ವಿಂಟಾಲ್‌ಗೆ 2,897 ರೂಪಾಯಿಗೆ ತಲುಪಿದೆ. ಇದು ಕೇವಲ ಒಂದು ತಿಂಗಳ ಹಿಂದಿನ ಬೆಲೆಗಿಂತ ಶೇ.43ರಷ್ಟು ಹೆಚ್ಚು. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 118.37 ರಷ್ಟು ಭಾರಿ ಏರಿಕೆಯಾಗಿದೆ.

ಮಹಾರಾಷ್ಟ್ರದ ನಾಸಿಕ್ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿಸುವ ಬೆಲೆಯನ್ನು ಪ್ರಸಕ್ತ ಋತುವಿನಲ್ಲಿ ಏಳು ಬಾರಿ ಹೆಚ್ಚಿಸಿದೆ. ಬೆಲೆ ಏರಿಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ತನ್ನ ಬಳಿಯಿರುವ ಬಫರ್ ಸ್ಟಾಕ್ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿದೆ. ಹೆಚ್ಚಿನ ಬೆಲೆ ದಾಖಲಾಗಿರುವ ದೆಹಲಿ, ಚೆನ್ನೈ, ಕೊಚ್ಚಿ ಮತ್ತು ಗುವಾಹಟಿಯಂತಹ ಪ್ರಮುಖ ನಗರಗಳಿಗೆ ನಾಸಿಕ್‌ನಿಂದ ಈರುಳ್ಳಿ ತಲುಪಿಸಲು ‘ಕಾಂದಾ ಎಕ್ಸ್‌ಪ್ರೆಸ್’ ವಿಶೇಷ ರೈಲುಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ. ಅತಿಯಾದ ಬೆಲೆ ಏರಿಕೆಯಾಗುತ್ತಿರುವ ನಗರಗಳಿಗೆ ತಕ್ಷಣವೇ ಪೂರೈಕೆ ಹೆಚ್ಚಿಸಿ ಬೆಲೆಯನ್ನು ಸ್ಥಿರಗೊಳಿಸುವುದು ಸರ್ಕಾರದ ಯೋಜನೆಯಾಗಿದೆ.

ಇತರೆ ತರಕಾರಿಗಳ ಬೆಲೆ ಇಳಿಕೆ, ಆದರೆ ಈರುಳ್ಳಿಯದ್ದೇ ಸವಾಲು

ವಿಶೇಷವೆಂದರೆ, ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದರೆ ಟೊಮೆಟೊ ಮತ್ತು ಆಲೂಗಡ್ಡೆ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಆಗಸ್ಟ್ ಮಧ್ಯದ ವೇಳೆಗೆ ಟೊಮೆಟೊ ಸಗಟು ಬೆಲೆ ಶೇ.58 ಮತ್ತು ಆಲೂಗಡ್ಡೆ ಬೆಲೆ ಶೇ.30ರಷ್ಟು ಇಳಿಕೆಯಾಗಿದೆ. ಆದರೆ ಭಾರತೀಯ ಅಡುಗೆಯಲ್ಲಿ ಈರುಳ್ಳಿ ಪ್ರಮುಖ ಪಾತ್ರ ವಹಿಸುವುದರಿಂದ ಒಟ್ಟಾರೆ ಆಹಾರ ಹಣದುಬ್ಬರದ ಮೇಲೆ ಇದು ತೀವ್ರ ಪರಿಣಾಮ ಬೀರಿದೆ. ಜುಲೈ ತಿಂಗಳ ಚಿಲ್ಲರೆ ಹಣದುಬ್ಬರ ಶೇಕಡಾ 4.45 ಕ್ಕೆ ಹಾಗೂ ಆಹಾರ ಹಣದುಬ್ಬರ ಶೇಕಡಾ 5.52 ಕ್ಕೆ ಏರಲು ಈರುಳ್ಳಿ ಬೆಲೆ ಏರಿಕೆಯೇ ಪ್ರಮುಖ ಕಾರಣ ಎನ್ನಲಾಗಿದೆ.

ಬೆಲೆ ಇಳಿಕೆ ಯಾವಾಗ?

ಮಾರುಕಟ್ಟೆ ತಜ್ಞರ ಪ್ರಕಾರ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಚಳಿಗಾಲದ ಋತುವಿನ ದಾಸ್ತಾನು ಸಂಪೂರ್ಣ ಖಾಲಿಯಾಗಲಿದ್ದು, ಮುಂಗಾರು ಬೆಳೆ ಮಾರುಕಟ್ಟೆಗೆ ಬರುವುದು ತಡವಾದರೆ ಈರುಳ್ಳಿ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ಸೆಪ್ಟೆಂಬರ್ ತಿಂಗಳ ಹವಾಮಾನವು ಈರುಳ್ಳಿ ಪೂರೈಕೆಯ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದ್ದು, ನೂತನ ಬೆಳೆ ಉತ್ತಮವಾಗಿ ಮಾರುಕಟ್ಟೆಗೆ ಬಂದಾಗಷ್ಟೇ ಬೆಲೆ ಸಾಧಾರಣ ಮಟ್ಟಕ್ಕೆ ಮರಳಲಿದೆ.

ಇದನ್ನೂ ಓದಿ : ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB

Tags: Consumer PriceFood InflationGrocery PricesInflation in IndiaKarnataka NewsKarnataka News beatKNBOnion MarketOnion Price HikeOnion PricesRising PricesVegetable Price Hike
SendShareTweet
Previous Post

ನೈಟ್‌ಕ್ಲಬ್ ಬಳಿ ಹೈಡ್ರಾಮಾ : ಕೈಕೋಳದಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸ್.. ತನಿಖೆ ಆರಂಭಿಸಿದ ECB

Next Post

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

Related Posts

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!
ದೇಶ

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

Next Post
250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇಂದ್ರ ಸರ್ಕಾರದ MRPL ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಭರ್ಜರಿ ಸ್ಯಾಲರಿ

ಕೇಂದ್ರ ಸರ್ಕಾರದ MRPL ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಭರ್ಜರಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ನೇಮಕಾತಿ : 53 ಸಾವಿರ ರೂಪಾಯಿ ಸ್ಯಾಲರಿ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಔಟ್ : ಕುತೂಹಲದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಬ್ಯಾಟಿಂಗ್ ಕೋಚ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat