ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈರುಳ್ಳಿ ದರ ಏರಿಕೆಯಾಗುವಂತಾಗಿದೆ. ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿ ಈರುಳ್ಳಿ ಕೊರತೆ ಸೃಷ್ಟಿಯಾಗಿದೆ. ಹೀಗಾಗಿ ದರ ಏರಿಕೆಯ ಅನಿವಾರ್ಯತೆ ಗ್ರಾಹಕರ ತಲೆನೋವಿಗೆ ಕಾರಣವಾಗಿದೆ.
ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಸಿಕೊಳ್ಳಲಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿಯ ಬೆಲೆ 60-70 ರೂ. ಆಗಿದೆ. ಈ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಗೃಹಿಣಿಯರು ಈಗಿನಿಂದಲೇ ಆತಂಕ ಪಡುತ್ತಿದ್ದಾರೆ.
ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಈರುಳ್ಳಿ ಬೆಳೆಯಲಾಗುತ್ತದೆ. ಆದರೆ, ಈ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹಾಳಾಗುತ್ತಿದೆ. ಹೀಗಾಗಿಯೇ ಈರುಳ್ಳಿ ಉತ್ಪಾದನೆ ತುಂಬಾ ಕಡಿಮೆಯಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿದ್ದು, ದರ ಏರಿಕೆಯಾಗಿದೆ.
ಈರುಳ್ಳಿ ಸಗಟು ದರ ಕ್ವಿಂಟಲ್ ಗೆ ಕನಿಷ್ಠ 2 ಸಾವಿರ ರೂ.ನಿಂದ ಗರಿಷ್ಠ 4500 ರೂ. ವರೆಗೆ ಇತ್ತು. ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55 ರೂ. ನಿಂದ 60 ರೂ.ಗೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ದರ ಕೂಡ ಗಗನಕ್ಕೆ ಏರಿಕೆಯಾಗಿದ್ದು, 400 ರೂ. ಗಡಿ ದಾಟಿ ಮಾರಾಟವಾಗುತ್ತಿದೆ.