ಐಸಿಸಿ ಟೆಸ್ಟ್ ಬ್ಯಾಟರ್ ಗಳ ನೂತನ ಶ್ರೇಯಾಂಕ ಬಿಡುಗಡೆಯಾಗಿದ್ದು, ಟಾಪ್ 5ರಲ್ಲಿ ಓರ್ವ ಭಾರತೀಯನಿಗೆ ಮಾತ್ರ ಅವಕಾಶ ಸಿಕ್ಕಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಭಾರತೀಯ ಬ್ಯಾಟ್ಸಮನ್ ಗಳು ಶ್ರೇಯಾಂಕದಲ್ಲಿ ಹಿಂದೆ ಉಳಿಯುತ್ತಿದ್ದಾರೆ. ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ತೋರಿರುವ ಜೋ ರೂಟ್ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ ಸಡಿಸಿರುವ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ 3ನೇ ಸ್ಥಾನದಲ್ಲಿದ್ದಾರೆ.
4ನೇ ಸ್ಥಾನದಲ್ಲಿ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇದ್ದಾರೆ. ಭಾರತದ ವಿರುದ್ಧ ಭರ್ಜರಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿರುವ ಟ್ರಾವಿಸ್ ಹೆಡ್ 6 ಸ್ಥಾನ ಮೇಲೇರಿ 5ನೇ ಶ್ರೇಯಾಂಕಕ್ಕೆ ಕುಳಿತಿದ್ದಾರೆ. 6ನೇ ಸ್ಥಾನದಲ್ಲಿ ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್, ಸೌತ್ ಆಫ್ರಿಕಾದ ಟೆಂಬಾ ಬವುಮಾ, ನ್ಯೂಜಿಲೆಂಡ್ ನ ಡೇರಿಲ್ ಮಿಚೆಲ್, ಭಾರತದ ರಿಷಭ್ ಪಂತ್, ಪಾಕಿಸ್ತಾನದ ಸೌದ್ ಶಕೀಲ್ ಕ್ರಮವಾಗಿ 7 ರಿಂದ 10ನೇ ಸ್ಥಾನದಲ್ಲಿದ್ದಾರೆ.