ನವದೆಹಲಿ: ʻಆಪರೇಷನ್ ಸಿಂಧೂರʼ ಕುರಿತು ಇಂದು ಲೋಕಸಭೆಯಲ್ಲಿ 16 ಗಂಟೆಗಳ ಕಾಲ ಮ್ಯಾರಥಾನ್ ಚರ್ಚೆ ನಡೆಯಲಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಚರ್ಚೆ ಶುರುವಾಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚರ್ಚೆ ಶುರು ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ಲೋಕಸಭೆಯಲ್ಲಿ 16 ಗಂಟೆ ಹಾಗೂ ರಾಜ್ಯಸಭೆಯಲ್ಲಿ 9 ಗಂಟೆಗಳ ಕಾಲ ಚರ್ಚೆಗೆ ಸಮಯ ನಿಗದಿಪಡಿಸಲಾಗಿದೆ. ಇಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪ್ರಧಾನಿ ಮೋದಿ ಕೂಡ ತಮ್ಮ ವಾದ ಮಂಡಿಸಲಿದ್ದಾರೆ ಎಂದು ವರದಿಯಾಗಿದೆ.
ಸಂಸತ್ ಮೂಲಗಳ ಪ್ರಕಾರ, ರಾಜನಾಥ್ ಸಿಂಗ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥರೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಕಾರ್ಯತಂತ್ರಗಳನ್ನು ಅಂತಿಮಗೊಳಿಸಲಾಗುತ್ತದೆ. ಇದೇ ವೇಳೆ ಚರ್ಚೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಇಂಡಿಯಾ ಒಕ್ಕೂಟ ಸಹ ಸಭೆ ನಡೆಸಲಿದೆ.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!