ಬೆಂಗಳೂರು: ಇತ್ತೀಚೆಗೆ ಸರ್ಕಾರಿ ಹುದ್ದೆಗಾಗಿ ಸಾಕಷ್ಟು ಪೈಪೋಟಿ ಕಂಡು ಬರುತ್ತಿವೆ. ವಿದ್ಯಾರ್ಥಿಗಳು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ತಿಂಗಳಲ್ಲಿ ಕೂಡ ಸರ್ಕಾರಿ ಕೆಲಸದ ಆಕಾಂಕ್ಷಿತರಿಗೆ ಅವಕಾಶಗಳಿದ್ದು, ಅರ್ಜಿ ಸಲ್ಲಿಸಬಹುದು.
ಫೆಬ್ರವರಿ ತಿಂಗಳಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ( Indian Oil Corporation Limited,)ಬ್ಯಾಂಕುಗಳು ಮತ್ತು ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಟ್ರೇಡ್/ಟೆಕ್ನೀಷಿಯನ್/ಪದವೀಧರ ಹುದ್ದೆಗಳಿಗೆ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು, ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆ. 13 ಆಗಿದೆ.
ಕೇಂದ್ರ ಬ್ಯಾಂಕ್ ಹುದ್ದೆಗಳು
ಬ್ಯಾಂಕ್ ಗಳಲ್ಲಿ ಕೆಲಸ ಮಾಡಲು ಬಯಸುವವರಿಗೆ ಈ ತಿಂಗಳಲ್ಲೂ ಶುಭ ಸುದ್ದಿ ಸಿಕ್ಕಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1000 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಗಾಗಿ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜ. 30ರಿಂದ ಅರ್ಜಿ ಆರಂಭವಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅಭ್ಯರ್ಥಿಗಳು ಫೆಬ್ರವರಿ 20 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು, www.centralbankofindia.co.in ಲಿಂಕ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಸುಪ್ರೀಂ ಕೋರ್ಟ್ ಹುದ್ದೆಗಳು
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಹುದ್ದೆ ಖಾಲಿ ಇವೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಗುಮಾಸ್ತ-ಕಮ್-ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ ಘೋಷಿಸಲಾಗಿದೆ. ಒಟ್ಟು 90 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 80 ಸಾವಿರ ರೂ. ವೇತನ ನೀಡಲಾಗುವುದು. ಅಭ್ಯರ್ಥಿಗಳು ಫೆಬ್ರವರಿ 7, 2025 ರವರೆಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ಹೊಂದಿರುವುದು ಕಡ್ಡಾಯವಾಗಿದೆ. ಇದಕ್ಕಾಗಿ ಪರೀಕ್ಷೆಯನ್ನು ಮಾರ್ಚ್ 9, 2025 ರಂದು ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು, ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ sci.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.