ರಾಹುಲ್ ಗಾಂಧಿಯವರ ಸುಳ್ಳಿನ ಟೈರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಪಂಚರ್ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಎಸ್ಐಆರ್ ಬಗ್ಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ನಾಟಕೀಯ ಪ್ರಹಸನಕ್ಕೆ ಈಗ ಸ್ವತಃ ಅವರದ್ದೇ ಸಂಪುಟದ ಸಚಿವ ಸತೀಶ್ ಜಾರಕಿಹೊಳಿ ಕನ್ನಡಿ ಹಿಡಿದಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಅತ್ಯಂತ ಸಮರ್ಪಕವಾಗಿ ನಡೆದಿದೆ ಎಂದು ಜಾರಕಿಹೊಳಿ ನೀಡಿರುವ ಹೇಳಿಕೆಯು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಬೀದಿಯಲ್ಲಿ ನಿಂತು ನಾಟಕವಾಡುತ್ತಿರುವ ಕಾಂಗ್ರೆಸ್ ನಾಯಕರ ಬೂಟಾಟಿಕೆಯನ್ನು ಸಂಪೂರ್ಣವಾಗಿ ಬಯಲು ಮಾಡಿದೆ ಎಂದಿದ್ದಾರೆ.

















