ಅಘೋಷಿತ ವಿದೇಶಿ ಆಸ್ತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಡೆದಿದ್ದ ಎನ್ನಲಾದ ED ದಾಳಿ ಹಿಂದೆ ವಿಪಕ್ಷಗಳ ಕೈವಾಡವಿದೆ ಎಂದು ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆರೋಪಿಸಿದ್ದಾರೆ.
ಗುರುವಾರ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) ಸೆಕ್ಷನ್ 37 ರ ಅಡಿಯಲ್ಲಿ ಬಾಗೇಪಲ್ಲಿ ಶಾಸಕರ ನಿವಾಸ ಸೇರಿದಂತೆ ಬೆಂಗಳೂರಿನ ಐದು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ವಿದೇಶದಲ್ಲಿ ಯಾವುದೇ ಆಸ್ತಿ ಮಾಡಿಲ್ಲ. ಜುಲೈ 14 ರಂದು ವಿಚಾರಣೆಗಾಗಿ ಇಡಿ ಅಧಿಕಾರಿಗಳು ಕರೆದಿರುವುದಾಗಿ ತಿಳಿಸಿದ್ದಾರೆ.
ವಿದೇಶಿ ಬ್ಯಾಂಕ್ ಠೇವಣಿ, ವಾಹನಗಳಲ್ಲಿನ ಹೂಡಿಕೆ ಮತ್ತು ಮಲೇಷ್ಯಾ, ಹಾಂಕಾಂಗ್, ಜರ್ಮನಿ ಮತ್ತಿತರ ದೇಶಗಳಲ್ಲಿ ರೆಡ್ಡಿ ಮತ್ತು ಅವರ ಕುಟುಂಬ ಸದಸ್ಯರು ಹೊಂದಿರುವ ಸ್ಥಿರ ಆಸ್ತಿಗಳ ತನಿಖೆಗೆ ಸಂಬಂಧಿಸಿದಂತೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.



















