ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚೆ ನೀಡಲಾಗಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೇ 19 ಹಾಗೂ 20ರಂದು ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ನಾಳೆ ಹಾಗೂ ನಾಡಿದ್ದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ನೀಡಿರುವ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಭಾರಿ ಮಳೆಯಾಗಿದ್ದು, ಹಲವೆಡೆ ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.