ಬೆಂಗಳೂರು: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದ ಐದು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದ್ದು, ಉಳಿದಂತೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಳ್ಳಾರಿ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.



















