ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಸಿಬಿಐ ತನಿಖೆ ಆರಂಭವಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈಗಾಗಲೇ ಪ್ರಕರಣ ಒಂದು ಹಂತಕ್ಕೆ ಬಂದು ನಿಂತಿದೆ. ಆದರೆ, ಈ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದು ಹೇಳಿ, ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡ ನಂತರ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೂರು ವರ್ಷ ಬಾಳಲಿ. ಕರ್ನಾಟಕದಲ್ಲಿ ಒಮ್ಮೆ ಸಿಎಂ ಆಗಬೇಕು ಎಂಬ ಆಸೆಯನ್ನು ಮಲ್ಲಿಕಾರ್ಜುನ ಖರ್ಗೆ ತೀರಿಸಿಕೊಳ್ಳಬಹುದು. ಆದರೆ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.