ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಜನ್ಮದಿನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಶುಭಕೋರಿ ಹಾರೈಸಿದ ಡಿಕೆಶಿ, ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ ‘ಕೈ’ ಹೀಗೆ ಜೊತೆಯಾಗಿರಲಿದೆ ಎಂದಿದ್ದಾರೆ.
ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ ಎಂದೂ ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಇಂದು 77ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ರಾಜಕೀಯ ಗಣ್ಯರು ಅವರಿಗೆ ಶುಭಕೋರಿ ಹಾರೈಸಿದ್ದಾರೆ.