ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ವಿಜಯನಗರ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದರೂ ಸಮಸ್ಯೆಗಳು ಬೆಟ್ಟದಷ್ಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳೆಯರು ದೂರು ನೀಡಿದರೂ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಅಸಹಾಯಕರ ಮುಗ್ಧತೆಯನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಾವೊಬ್ಬ ಅಧಿಕಾರಿಯೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.
ಸ್ಮಶಾನದಲ್ಲೇ ಕುಟುಂಬವೊಂದು ವಾಸಿಸುತ್ತಿದ್ದರೂ ಜಿಲ್ಲಾಡಳಿತದಿಂದ ಒಂದು ಸೂರು ಕಲ್ಪಿಸಿಕೊಡಲು ಆಗಿಲ್ಲ ಎಂದಿದ್ದಾರೆ. ತಾವೇ ಖುದ್ದು ಭೇಟಿಯಾದ ಬಳಿಕ ಆ ಕುಟುಂಬಕ್ಕೆ ನೆರವು ದೊರೆತಿದೆ ಎಂದು ತಿಳಿಸಿದ್ದಾರೆ.

















