ಬೆಳಗಾವಿ: ಅನ್ಯಕೋಮಿನ ಯುವಕನೋರ್ವ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ನಗರದ (Belagavi) ಪಾಂಗುಳ ಗಲ್ಲಿಯಲ್ಲಿ (Pangula Galli) ನ ಅಶ್ವತ್ಥಾಮ ದೇವಸ್ಥಾನಕ್ಕೆ ಕಲ್ಲು ತೂರಾಟ ನಡೆ ನಡೆಸಿದ್ದಾನೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಉಜ್ವಲ್ ನಗರದ ನಿವಾಸಿ ಯಾಸೀರ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಜನರು ಆತನನ್ನು ಹಿಡಿಯುತ್ತಿದ್ದಂತೆ ‘‘ತಪ್ಪು ಮಾಡಿದ್ದೇನೆ ಕ್ಷಮಿಸಿಬಿಡಿ. ಮಂದಿರಕ್ಕೆ ಕಲ್ಲು ಹೊಡೆದಿದ್ದೇನೆ. ಮದ್ಯದ ನಶೆಯಲ್ಲಿ ತಪ್ಪು ಮಾಡಿದ್ದೇನೆ ಎಂದಿದ್ದಾನೆ ಎನ್ನಲಾಗಿದೆ.
ಹೋಳಿ ಹಬ್ಬದ ದಿನ ಕೆಲವರು ಬುರ್ಖಾ ಹಾಕಿ ಡ್ಯಾನ್ಸ್ ಮಾಡಿದ್ದರು. ಅದಕ್ಕೆ ಸಿಟ್ಟಿನಿಂದ ದೇವಸ್ಥಾನಕ್ಕೆ ಕಲ್ಲುಹೊಡೆದಿರುವುದಾಗಿ ಮದ್ಯಪಾನದ ನಶೆಯಲ್ಲಿದ್ದ ಆರೋಪಿ ಯಾಸೀರ್ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.