ದಾವಣಗೆರೆ: ರಸ್ತೆ ಅಭಿವೃದ್ಧಿಗಾಗಿ ಹಲವು ದಿನಗಳಿಂದ ಮನವಿ ಮಾಡಿದರೂ ಯಾವುದೇ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಜನರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಭಾನುವಳ್ಳಿ ಗ್ರಾಮದ ಎಸ್ ಬಿಐ ಬ್ಯಾಂಕ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆಗೆ ಹೋಗುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿವೆ.
ಹೀಗಾಗಿ ಕಳೆದ 10 ವರ್ಷಗಳಿಂದಲೂ ರಸ್ತೆ ಅಭಿವೃದ್ಧಿ ಪಡಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ಆದರೂ ರಸ್ತೆ ಅಭಿವೃದ್ಧಿ ಮಾಡದಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕರು, ಮಹಿಳೆಯರು ಕೆಸರು ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಮಕ್ಕಳು, ವೃದ್ಧರಿಗೆ ಈ ರಸ್ತೆಯಲ್ಲಿ ಓಡಾಟ ಮಾಡಲು ಆಗುತ್ತಿಲ್ಲ. ಹೀಗಾಗಿ ಕೂಡಲೇ ರಸ್ತೆ ಅಭಿವೃದ್ಧಿ ಪಡಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.