ರಾಯಚೂರು : ವಿಷಪೂರಿತ ನೀರು ಸೇವಿಸಿ 60ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ನಡೆದಿದೆ.
ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. 100 ಕುರಿಗಳ ಪೈಕಿ ಇನ್ನೂ ಸಾವು ಹೆಚ್ಚಾಗುವ ಸಾಧ್ಯತೆ ಇದೆ. ಕುರಿಗಳು ಕುಡಿದ ಕೃಷಿ ಹೊಂಡದ ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟವಾಗಿದ್ದು, ಭೀಮ್ಮಪ್ಪ ಕಣ್ಣೀರು ಹಾಕುತ್ತಿದ್ದಾರೆ.
ಸರಕಾರದಿಂದ ಸೂಕ್ತ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸುತ್ತಿದ್ದು, ಸದ್ಯ ಸ್ಥಳಕ್ಕೆ ಗಬ್ಬೂರು ಠಾಣೆ ಪೊಲೀಸರು ಪಶು ವೈಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ | ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ



















