ಹುಬ್ಬಳ್ಳಿ – ಧಾರವಾಡ ಅವಳಿ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಹೀಗಾಗಿ ಜನವ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ರಸ್ತೆಗಳೆಲ್ಲ ಮಳೆಯಿಂದಾಗಿ ಜಲಾವೃತಗೊಂಡಿವೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಟ ನಡೆಸುವಂತಾಗಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಕೂಡ ಮಳೆಯಾಗುವ ಸಾಧ್ಯತೆ ಇರುವುದರಿಂದಾಗಿ ಜನ ಆತಂಕ ವ್ಯಕ್ತಪಡಿಸಿದ್ದಾರೆ.