ರಾಯಚೂರು: ಎಕ್ಸೆಲ್ ಕಟ್ ಆಗಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಹತ್ತಿರ ಈ ಘಟನೆ ನಡೆದಿದೆ. ಬಸ್ ನ ಎಕ್ಸೆಲ್ ಕಟ್ ಆದ ಪರಿಣಾಮ ಬಸ್ ಪಕ್ಕದ ಜಮೀನಿನಲ್ಲಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ ಬಸವರಾಜ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಬಸ್ ನಲ್ಲಿ 77 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಮಾರ್ಗವಾಗಿ ಬಸ್ ಹೊರಟಿತ್ತು. ಬಸ್ ನಲ್ಲಿ 33ಕ್ಕೂ ಅಧಿಕ ವಿದ್ಯಾರ್ಥಿಗಳು ಕೂಡ ಇದ್ದರು. ಈ ಪೈಕಿ ಹಲವು ವಿದ್ಯಾರ್ಥಿಗಳು ಕೂಡ ಗಾಯಗೊಂಡಿದ್ದಾರೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.