ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಸೆಮೀಸ್‌ಗೆ ಲಗ್ಗೆ ಇಟ್ಟ ಕರ್ನಾಟಕ | ದೇವದತ್ ಪಡಿಕ್ಕಲ್ ಐತಿಹಾಸಿಕ ದಾಖಲೆ

January 13, 2026
Share on WhatsappShare on FacebookShare on Twitter

ಬೆಂಗಳೂರು: ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಜೈತ್ರಯಾತ್ರೆ ಮುಂದುವರಿದಿದೆ. ಸೋಮವಾರ (ಜ.12) ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ, ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಮಳೆ ಬಾಧಿತ ಪಂದ್ಯದಲ್ಲಿ ವಿಜೆಡಿ (VJD) ನಿಯಮದನ್ವಯ ಕರ್ನಾಟಕ 55 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, ಈ ಪಂದ್ಯದಲ್ಲಿ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರು ಅಪರೂಪದ ಐತಿಹಾಸಿಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಪಡಿಕ್ಕಲ್ ಹೆಸರಿಗೆ ಐತಿಹಾಸಿಕ ದಾಖಲೆ

ಕರ್ನಾಟಕದ ಗೆಲುವಿನ ರೂವಾರಿ ಎನಿಸಿದ ದೇವದತ್ ಪಡಿಕ್ಕಲ್ ಅವರು ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಸಾಧನೆ ಮಾಡಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಇತಿಹಾಸದಲ್ಲೇ ಒಂದಕ್ಕಿಂತ ಹೆಚ್ಚು ಆವೃತ್ತಿಗಳಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಡಿಕ್ಕಲ್ ಪಾತ್ರರಾಗಿದ್ದಾರೆ. ಈ ಹಿಂದೆ ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ನಾರಾಯಣ್ ಜಗದೀಶನ್ ಮತ್ತು ಕರುಣ್ ನಾಯರ್ ಅವರಂತಹ ಘಟಾನುಘಟಿಗಳು ಒಂದು ಆವೃತ್ತಿಯಲ್ಲಿ 700 ರನ್ ಗಡಿ ದಾಟಿದ್ದರು. ಆದರೆ, ಪಡಿಕ್ಕಲ್ ಅವರು ಎರಡು ಬಾರಿ ಈ ಮೈಲಿಗಲ್ಲನ್ನು ತಲುಪುವ ಮೂಲಕ ಕೀರ್ತಿ ಶಿಖರವೇರಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಶಮ್ಸ್ ಮುಲಾನಿ ಎಸೆದ 24ನೇ ಓವರ್‌ನಲ್ಲಿ ರನ್ ಗಳಿಸುವ ಮೂಲಕ ಪಡಿಕ್ಕಲ್ 2025-26ರ ಸಾಲಿನಲ್ಲಿ 700 ರನ್ ಪೂರೈಸಿದರು.

ಮಳೆ ಅಡ್ಡಿ: ವಿಜೆಡಿ ನಿಯಮದಡಿ ಗೆಲುವು

ಮುಂಬೈ ನೀಡಿದ್ದ 255 ರನ್‌ಗಳ ಗುರಿ ಬೆನ್ನತ್ತಿದ ಕರ್ನಾಟಕ ತಂಡವು ಭದ್ರ ಬುನಾದಿ ಹಾಕಿಕೊಂಡಿತ್ತು. 33 ಓವರ್‌ಗಳಲ್ಲಿ ತಂಡವು 1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ ಸುಸ್ಥಿತಿಯಲ್ಲಿದ್ದಾಗ ಮಳೆ ಮತ್ತು ಮಂದಬೆಳಕು ಆಟಕ್ಕೆ ಅಡ್ಡಿಪಡಿಸಿತು. ಈ ಹಂತದಲ್ಲಿ ಪಂದ್ಯವನ್ನು ಮುಂದುವರಿಸಲು ಸಾಧ್ಯವಾಗದಿದ್ದಾಗ, ವಿಜೆಡಿ ನಿಯಮವನ್ನು ಅನ್ವಯಿಸಲಾಯಿತು. ನಿಯಮದ ಪ್ರಕಾರ ಕರ್ನಾಟಕ ತಂಡವು ಅಗತ್ಯವಿದ್ದ ರನ್‌ಗಿಂತ ಸಾಕಷ್ಟು ಮುಂದಿದ್ದ ಕಾರಣ 55 ರನ್‌ಗಳ ಅಂತರದ ಗೆಲುವು ಘೋಷಿಸಲಾಯಿತು.

ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (12) ಬೇಗನೆ ನಿರ್ಗಮಿಸಿದರೂ, ನಂತರ ಜೊತೆಗೂಡಿದ ದೇವದತ್ ಪಡಿಕ್ಕಲ್ ಮತ್ತು ಕರುಣ್ ನಾಯರ್ ಜೋಡಿ ಮುಂಬೈ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿತು. ಪಡಿಕ್ಕಲ್ 95 ಎಸೆತಗಳಲ್ಲಿ ಅಜೇಯ 81 ರನ್ ಗಳಿಸಿದರೆ, ಅವರಿಗೆ ಸಾಥ್ ನೀಡಿದ ಕರುಣ್ ನಾಯರ್ 80 ಎಸೆತಗಳಲ್ಲಿ ಅಜೇಯ 74 ರನ್ ಬಾರಿಸಿದರು. ಈ ಇಬ್ಬರ ಮುರಿಯದ ಜೊತೆಯಾಟವು ಕರ್ನಾಟಕದ ಗೆಲುವನ್ನು ಸುಲಭವಾಗಿಸಿತು.

ಬೌಲರ್‌ಗಳ ಶಿಸ್ತಿನ ದಾಳಿ

ಇದಕ್ಕೂ ಮುನ್ನ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕರ್ನಾಟಕ ತಂಡದ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ವಿದ್ಯಾಧರ್ ಪಾಟೀಲ್ ಅವರ ನೇತೃತ್ವದ ಬೌಲಿಂಗ್ ದಾಳಿಗೆ ನಲುಗಿದ ಮುಂಬೈ ತಂಡ ನಿಗದಿತ ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಲಷ್ಟೇ ಶಕ್ತವಾಯಿತು. ವಿದ್ಯಾಧರ್ ಪಾಟೀಲ್ 3 ವಿಕೆಟ್ ಕಿತ್ತರೆ, ವಿದ್ವತ್ ಕಾವೇರಪ್ಪ ಮತ್ತು ಅಭಿಲಾಷ್ ಶೆಟ್ಟಿ ತಲಾ 2 ವಿಕೆಟ್ ಪಡೆದು ಮಿಂಚಿದರು.

ಮುಂಬೈ ಪರ ಶಮ್ಸ್ ಮುಲಾನಿ 91 ಎಸೆತಗಳಲ್ಲಿ 86 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರಾದರೂ, ಅವರಿಗೆ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ. ಆರಂಭಿಕ ಆಟಗಾರರಾದ ಅಂಗಕ್ರಿಶ್ ರಘುವಂಶಿ (27) ಮತ್ತು ಇಶಾನ್ ಮೂಲ್ಚಂದಾನಿ (20) ಉತ್ತಮ ಆರಂಭ ನೀಡಲು ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಸಿದ್ದೇಶ್ ಲಾಡ್ (38) ಕೆಲಕಾಲ ಪ್ರತಿರೋಧ ಒಡ್ಡಿದ್ದು ಬಿಟ್ಟರೆ, ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಅಂತಿಮವಾಗಿ ಬೌಲರ್‌ಗಳ ಶಿಸ್ತು ಮತ್ತು ಬ್ಯಾಟರ್‌ಗಳ ಜವಾಬ್ದಾರಿಯುತ ಆಟದಿಂದ ಕರ್ನಾಟಕ ತಂಡ ಉಪಾಂತ್ಯ ಹಂತಕ್ಕೆ ತಲುಪಿದೆ.

ಇದನ್ನೂ ಓದಿ: ಭಾರತದಲ್ಲೇ ಬಾಂಗ್ಲಾ ಪಂದ್ಯಗಳು | ಆಟದ ತಾಣ ಬದಲಾವಣೆ ಬೇಡಿಕೆಯನ್ನು ತಳ್ಳಿಹಾಕಿದ ICC

SendShareTweet
Previous Post

ಹಾಸನ | ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ‌ ಪತ್ನಿಯನ್ನೇ ಕೊಂದ ಪಾಪಿ ಪತಿ

Next Post

ಬಾಂಗ್ಲಾ ಪೊಲೀಸ್ ವಶದಲ್ಲಿದ್ದ ಹಿಂದೂ ನಾಯಕ, ಗಾಯಕ ಪ್ರೊಲೊಯ್ ಚಾಕಿ ಸಾವು!

Related Posts

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ
Uncategorized

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ
Uncategorized

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!
Uncategorized

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!
Uncategorized

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

Next Post
ಬಾಂಗ್ಲಾ ಪೊಲೀಸ್ ವಶದಲ್ಲಿದ್ದ ಹಿಂದೂ ನಾಯಕ, ಗಾಯಕ ಪ್ರೊಲೊಯ್ ಚಾಕಿ ಸಾವು!

ಬಾಂಗ್ಲಾ ಪೊಲೀಸ್ ವಶದಲ್ಲಿದ್ದ ಹಿಂದೂ ನಾಯಕ, ಗಾಯಕ ಪ್ರೊಲೊಯ್ ಚಾಕಿ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat