ಪಹಲ್ಗಾಮ್ ಭಯೋತ್ಪಾದಕರ ದಾಳಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಶೀಘ್ರವೇ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ರಾಹುಲ್, ಈ ನಿರ್ಣಾಯಕ ಸಮಯದಲ್ಲಿ ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಟ್ಟಾಗಿ ನಿಲ್ಲತ್ತೇವೆ ಎಂಬುವುದನ್ನು ಭಾರತ ತೋರಿಸಬೇಕು ಅಂತಾ ರಾಹುಲ್ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಂಸತ್ತಿನ ಉಭಯ ಸದನಗಳ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ. ಈ ಕುರಿತ ಪೋಸ್ಟನ್ನೂ ರಾಹುಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿದ್ದಾರೆ.