ನವದೆಹಲಿ : ಭಾರತದ ಜಲಗಡಿ ಪ್ರವೇಶಿಸಿದ ಪಾಕ್ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು, ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಗುಜರಾತ್ ರಕ್ಷಣಾ ಪಿಆರ್‌ಒ ವಿಂಗ್ ಕಮಾಂಡರ್ ಅಭಿಷೇಕ್ ಕುಮಾರ್ ತಿವಾರಿ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತೀಯ ಕೋಸ್ಟ್ ಗಾರ್ಡ್ ಬುಧವಾರ ತ್ವರಿತವಾಗಿ ಕಾರ್ಯನಿರ್ವಹಿಸಿ ಭಾರತದ ವಿಶೇಷ ಆರ್ಥಿಕ ವಲಯ (EEZ) ಒಳಗೆ 11 ಸಿಬ್ಬಂದಿಯೊಂದಿಗೆ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪ್ರಧಾನಿ ಮೋದಿಗೆ ಅವಹೇಳನ | ಕೊಡಗಿನಲ್ಲಿ ಮೂವರ ಬಂಧನ!



















