ನ್ಯೂಯಾರ್ಕ್: 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿಮಾತನಾಡಿದ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅದು “ಜಾಗತಿಕ ಭಯೋತ್ಪಾದನೆಯ ಕೇಂದ್ರ ಬಿಂದು” ವಾಗಿ ಮುಂದುವರೆದಿದೆ ಎಂದು ಶನಿವಾರ ವಾಗ್ದಾಳಿ ನಡೆಸಿದರು. ಅಲ್ಲಿ 26 ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಹ ಪ್ರಸ್ತಾಪಿಸಿದರು.
ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿಶ್ವಸಂಸ್ಥೆಯ ಗೊತ್ತುಪಡಿಸಿದ ಭಯೋತ್ಪಾದಕರ ಪಟ್ಟಿಯು ಕೇವಲ ಒಂದು ದೇಶದ ಪ್ರಜೆಗಳಿಂದ ತುಂಬಿದೆ. ಭಾರತದ ಪಕ್ಕದಲ್ಲೇ ಇರುವ ಆ ದೇಶ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಎನ್ನುವ ಮೂಲಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
26 ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಇದಕ್ಕಾಗಿ ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಸಲುವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮೂಲಕ ನೆರೆಯ ದೇಶದೊಳಗೆ ಅಡಗಿದ್ದ ಉಗ್ರರನ್ನು ಮಟ್ಟ ಹಾಕಲಾಯಿತು. ಇದರಿಂದ ಪಾಕಿಸ್ತಾನ ಉಗ್ರರಿಗೆ ಆಶ್ರಯ ನೀಡುತ್ತಿರುವುದು ಕೂಡ ಜಗತ್ತಿನ ಮುಂದೆ ಮತ್ತೊಮ್ಮೆ ಬಯಲಾಯಿತು.
ಈ ಮೂಲಕ ನೆರೆಯ ದೇಶದೊಳಗೆ ಅಡಗಿದ್ದ ಉಗ್ರರನ್ನು ಮಟ್ಟ ಹಾಕಲಾಯಿತು. ಇದರಿಂದ ಪಾಕಿಸ್ತಾನ ಉಗ್ರರಿಗೆ ಆಶ್ರಯ ನೀಡುತ್ತಿರುವುದು ಕೂಡ ಜಗತ್ತಿನ ಮುಂದೆ ಮತ್ತೊಮ್ಮೆ ಬಯಲಾಯಿತು ಎಂದಿದ್ದಾರೆ.



















