ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ 30ಕ್ಕೂ ಅಧಿಕ ಭಾರತೀಯರ ಸಾವಿಗೆ ಕಾರಣರಾಗಿರುವ ಘಟನೆ ಭಾರತೀಯರ ರಕ್ತ ಕುದಿಯುವಂತೆ ಮಾಡಿದೆ. ಹೀಗಾಗಿ ಪ್ರಧಾನಿ ಮೋದಿ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಈಗ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಭಾರತ ಮತ್ತು ಪಾಕಿಸ್ತಾನದ (Pakistan) ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಎರಡೂ ದೇಶಗಳು ನಾಗರಿಕ ವೀಸಾ ರದ್ದು ಮಾಡಿವೆ. ಹಲವು ಒಪ್ಪಂದ ರದ್ದಾಗಿವೆ. ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ.



















