ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pamban Bridge: ದೇಶದ ಮೊದಲ ವರ್ಟಿಕಲ್ ಲಿಫ್ಟ್ ಬ್ರಿಡ್ಜ್ “ಪಂಬನ್ ಸೇತುವೆ” ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

April 6, 2025
Share on WhatsappShare on FacebookShare on Twitter

ಚೆನ್ನೈ: ರಾಮನವಮಿಯ ಶುಭ ದಿನದಿಂದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ರಾಮೇಶ್ವರಂನಲ್ಲಿ ನೂತನ ಪಂಬನ್ ಸೇತುವೆಯನ್ನು(Pamban Bridge) ಲೋಕಾರ್ಪಣೆಗೊಳಿಸಿದ್ದಾರೆ. ದೇಶದ ಮೊದಲ ವರ್ಟಿಕಲ್ ಲಿಫ್ಟ್ ಬ್ರಿಡ್ಜ್ (ಲಂಬವಾಗಿ ಮೇಲೇಳುವ ಸಮುದ್ರ ಸೇತುವೆ) ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಂಬನ್ ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ತಮ್ಮ 3 ದಿನಗಳ ಶ್ರೀಲಂಕಾ ಪ್ರವಾಸ ಮುಗಿಸಿ ಭಾನುವಾರ ನೇರವಾಗಿ ತಮಿಳುನಾಡಿಗೆ ಬಂದಿಳಿದ ಪ್ರಧಾನಿ ಮೋದಿಯವರು, ರಾಮೇಶ್ವರಂಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಲಾಗಿರುವ ದೇಶದ ಮೊದಲ ಲಿಫ್ಟ್ ಸೇತುವೆಯನ್ನು ಉದ್ಘಾಟನೆ ಮಾಡಿದರು.

ಇದು ರಾಮೇಶ್ವರಂ ದ್ವೀಪಕ್ಕೆ ತಮಿಳುನಾಡಿನಿಂದ ರೈಲು ಸಂಪರ್ಕವನ್ನು ಒದಗಿಸುವ ಸೇತುವೆಯಾಗಿದೆ. ದೇಶದ ಆಧುನಿಕ ಎಂಜಿನಿಯರಿಂಗ್ ಅದ್ಭುತ ಎಂದೂ ಈ ಸೇತುವೆ ಪರಿಗಣಿಸಲ್ಪಟ್ಟಿದೆ.

ಭಾನುವಾರ ಶ್ರೀಲಂಕಾದಿಂದ ರಾಮೇಶ್ವರಂಗೆ ತಲುಪಿದ ಪ್ರಧಾನಿ ಮೋದಿ ಅವರು ಮಧ್ಯಾಹ್ನ ಸುಮಾರು 12:45ಕ್ಕೆ ಪ್ರಸಿದ್ಧ ರಾಮನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪೂಜೆ ಮಾಡಿದರು. ಮಧ್ಯಾಹ್ನ 1:30ರ ಸುಮಾರಿಗೆ, ಅವರು ಹೊಸ ಪಂಬನ್ ಸೇತುವೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ, ಸೇತುವೆಯ 72.5 ಮೀಟರ್ ಉದ್ದದ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ ಅನ್ನು ಏರಿಸಲಾಯಿತು. ಈ ವೇಳೆ ಸೇತುವೆಯಡಿಯಲ್ಲಿ ಕರಾವಳಿ ರಕ್ಷಕ ಪಡೆಯ ಹಡಗು ಸಾಗುವುದನ್ನು ತೋರಿಸಲಾಯಿತು.
ಪಂಬನ್ ಸೇತುವೆಯ ವೈಶಿಷ್ಟ್ಯತೆ

A bridge that connects with the Tamil culture & heritage…

PM @narendramodi Ji will inaugurate the landmark new Pamban Bridge today.
📍Rameswaram, Tamil Nadu pic.twitter.com/1hgYbkXuDf

— Ashwini Vaishnaw (@AshwiniVaishnaw) April 5, 2025

ಈ ಸೇತುವೆಯು 2.08 ಕಿಲೋಮೀಟರ್ ಉದ್ದವಿದ್ದು, 99 ಸ್ಪ್ಯಾನ್‌ಗಳನ್ನು ಹೊಂದಿದೆ. ಇದರ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ 17 ಮೀಟರ್ ಎತ್ತರಕ್ಕೆ ಏರಬಲ್ಲದು. ಇದು ಮೇಲಕ್ಕೇರುವ ಮೂಲಕ, ಸೇತುವೆಯ ಕೆಳಗೆ ದೊಡ್ಡ ಹಡಗುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುತ್ತದೆ. ಈ ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ನಿರ್ಮಿಸಿದೆ.

ಪಂಬನ್ ಸೇತುವೆಯು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾಗಿದೆ. 1914 ರಲ್ಲಿ ಬ್ರಿಟಿಷ್ ಎಂಜಿನಿಯರ್‌ಗಳು ನಿರ್ಮಿಸಿದ ಹಳೆಯ ಪಂಬನ್ ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗಿದೆ. ಹಳೆಯ ಸೇತುವೆಯು 2022 ರಲ್ಲಿ ತುಕ್ಕು ಹಿಡಿದ ಕಾರಣ ಅದರ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಹಳೆಯ ಸೇತುವೆಯ ನಿರ್ವಹಣಾ ವೆಚ್ಚವೂ ಅಧಿಕವಾಗಿದ್ದರಿಂದ 2019ರಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆತಿತ್ತು. ಹಳೆಯ ಸೇತುವೆಯಲ್ಲಿ ರೈಲುಗಳ ವೇಗದ ಮಿತಿ ಗಂಟೆಗೆ 10 ಕಿ.ಮೀ. ನಿಗದಿಪಡಿಸಲಾಗಿತ್ತು. ಆದರೆ ನೂತನ ಸೇತುವೆಯಲ್ಲಿ ರೈಲುಗಳು ಗಂಟೆಗೆ 80 ಕಿ.ಮೀ. ವೇಗದಲ್ಲಿ ಸಾಗಬಹುದಾಗಿದೆ.

ಎತ್ತರ ಮತ್ತು ವಿನ್ಯಾಸ: ಹಳೆಯ ಸೇತುವೆಗಿಂತ ಹೊಸ ಸೇತುವೆ 3 ಮೀಟರ್ ಎತ್ತರದಲ್ಲಿದ್ದು, ದೊಡ್ಡ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತದೆ.
ವರ್ಟಿಕಲ್ ಲಿಫ್ಟ್ ಮೆಕ್ಯಾನಿಸಂ: ಇದು ಕೇವಲ 5 ನಿಮಿಷಗಳಲ್ಲಿ 22 ಮೀಟರ್ ಎತ್ತರಕ್ಕೆ ಏರಬಲ್ಲದು. ಹಳೆಯ ಸೇತುವೆಗೆ 25-30 ನಿಮಿಷಗಳು ಬೇಕಾಗಿತ್ತು.

ಬಾಳಿಕೆ: ಸ್ಟೇನ್‌ಲೆಸ್ ಸ್ಟೀಲ್ ಅನ್ನು ಬಳಸಲಾಗಿದೆ. ಉತ್ತಮ ಗುಣಮಟ್ಟದ ರಕ್ಷಣಾತ್ಮಕ ಪೇಂಟ್ ಅನ್ನೂ ಬಳಸಲಾಗಿದೆ. ಕಠಿಣ ಸಮುದ್ರ ಪರಿಸರದಲ್ಲಿ ದೀರ್ಘಕಾಲ ಬಾಳಿಕೆ ಬರುವಂತೆ ವಿನ್ಯಾಸಗೊಳಿಸಲಾಗಿದೆ.

ಇತರೆ ಯೋಜನೆಗಳ ಲೋಕಾರ್ಪಣೆ
ಪಂಬನ್ ಸೇತುವೆಯ ಉದ್ಘಾಟನೆಯ ಜೊತೆಗೆ, ಮೋದಿ ಅವರು ತಮಿಳುನಾಡಿನಲ್ಲಿ 8,300 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇವುಗಳಲ್ಲಿ ಪ್ರಮುಖವಾದವೆಂದರೆ,

ವಾಲಾಜಪೇಟ್ – ರಾಣಿಪೇಟ್ ಎನ್‌ಎಚ್-40: 28 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಯೋಜನೆಗೆ ಶಂಕುಸ್ಥಾಪನೆ. ವಿಲುಪ್ಪುರಂ – ಪುದುಚೇರಿ ಎನ್‌ಎಚ್-332: 29 ಕಿ.ಮೀ ಉದ್ದದ ರಸ್ತೆಯ ಚತುಷ್ಪಥ ಯೋಜನೆ ಸಮರ್ಪಣೆ. ಪೂಂಡಿಯಾನ್‌ಕುಪ್ಪಂ – ಸಟ್ಟನಾಥಪುರಂ ಎನ್‌ಎಚ್-32: 57 ಕಿ.ಮೀ ಉದ್ದದ ರಸ್ತೆ ಲೋಕಾರ್ಪಣೆ. ಚೋಲಾಪುರಂ – ತಂಜಾವೂರು ಎನ್‌ಎಚ್-36: 48 ಕಿ.ಮೀ ಉದ್ದದ ರಸ್ತೆಯ ಉದ್ಘಾಟನೆ.

ಈ ಯೋಜನೆಗಳು ರಾಜ್ಯದ ಯಾತ್ರಾ ಕೇಂದ್ರಗಳು, ಪ್ರವಾಸಿ ತಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಬಂದರುಗಳಿಗೆ ತ್ವರಿತ ಸಂಪರ್ಕವನ್ನು ಒದಗಿಸುವ ಮೂಲಕ ಸ್ಥಳೀಯ ರೈತರಿಗೆ ಕೃಷಿ ಉತ್ಪನ್ನಗಳ ಸಾಗಣೆಗೆ ಮತ್ತು ಸಣ್ಣ ಪ್ರಮಾಣದ ಉದ್ಯಮಗಳ ಆರ್ಥಿಕ ಚಟುವಟಿಕೆಗೆ ಸಹಾಯ ಮಾಡಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವ

ಪಂಬನ್ ಸೇತುವೆಯು ರಾಮಾಯಣದಲ್ಲಿ ಉಲ್ಲೇಖಿಸಲಾದ ರಾಮ ಸೇತುವಿನ ಆರಂಭದ ಸ್ಥಳವಾದ ಧನುಷ್ಕೋಡಿಯ ಸಮೀಪದಲ್ಲಿದೆ. ಇದು ಈ ಸೇತುವೆಗೆ ಆಧ್ಯಾತ್ಮಿಕ ಮಹತ್ವವನ್ನು ಒದಗಿಸುತ್ತದೆ. ರಾಮೇಶ್ವರಂ ವಾರ್ಷಿಕವಾಗಿ 25 ಲಕ್ಷಕ್ಕೂ ಹೆಚ್ಚು ಭಕ್ತರನ್ನು ಆಕರ್ಷಿಸುತ್ತದೆ. ಈ ಹೊಸ ಸೇತುವೆಯು ಯಾತ್ರಿಕರಿಗೆ ಸುಗಮ ಮತ್ತು ವೇಗವಾದ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಈ ಉದ್ಘಾಟನೆಯು ರಾಮ ನವಮಿಯಂದು ನಡೆದಿರುವುದು ಇನ್ನಷ್ಟು ಸಾಂಕೇತಿಕ ಮಹತ್ವವನ್ನು ಒದಗಿಸಿದೆ. ಇದು ರಾಮೇಶ್ವರಂಗೆ ಸಂಪರ್ಕ ಒದಗಿಸುವುದರ ಜೊತೆಗೆ, ತಮಿಳುನಾಡಿನ ಆರ್ಥಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಹೊಸ ಆಯಾಮವನ್ನು ತಂದು ಕೊಟ್ಟಿದೆ.

Tags: inauguratedPamban BridgePM ModiPoliticianvertical lift bridge
SendShareTweet
Previous Post

ಗೌತಮ್ ಗಂಭೀರ್‌ಗೆ ಅಲ್ಲ, ತಮ್ಮ ನೆರವಿಗೆ ಬಂದ ಕೋಚ್​ಗೆ ಧನ್ಯವಾದ ಹೇಳಿದ ಕೆ. ಎಲ್ ರಾಹುಲ್​

Next Post

ಹಾರ್ದಿಕ್ ಪಾಂಡ್ಯ ಭಾರತದ ಮುಂಬರುವ ವಿಶ್ವಕಪ್‌ಗಳಿಗೆ ನಾಯಕ?

Related Posts

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!
ದೇಶ

ಮಧುರೈ LIC ಕಚೇರಿ ಅಗ್ನಿ ಅವಘಡಕ್ಕೆ ಭೀಕರ ತಿರುವು | AC ಶಾರ್ಟ್ ಸರ್ಕ್ಯೂಟ್ ಅಲ್ಲ, ಅದು ಸಹೋದ್ಯೋಗಿಯೇ ಮಾಡಿದ ಕೊಲೆ!

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!
ರಾಜಕೀಯ

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್
ದೇಶ

ಉದಯನಿಧಿ ಸ್ಟಾಲಿನ್ ‘ಸನಾತನ’ ಹೇಳಿಕೆ ನರಮೇಧ, ಸಾಂಸ್ಕೃತಿಕ ಹತ್ಯೆಗೆ ಸಮ | ಅದು ದ್ವೇಷ ಭಾಷಣ ಎಂದ ಮದ್ರಾಸ್ ಹೈಕೋರ್ಟ್

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ
ದೇಶ

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ
ದೇಶ

27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ GBA ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್!
ರಾಜಕೀಯ

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ GBA ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್!

Next Post
ಹಾರ್ದಿಕ್ ಪಾಂಡ್ಯ ಭಾರತದ ಮುಂಬರುವ ವಿಶ್ವಕಪ್‌ಗಳಿಗೆ ನಾಯಕ?

ಹಾರ್ದಿಕ್ ಪಾಂಡ್ಯ ಭಾರತದ ಮುಂಬರುವ ವಿಶ್ವಕಪ್‌ಗಳಿಗೆ ನಾಯಕ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat