ಹಾವೇರಿ: ಪಂಚಮ ಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಡಿ. 10ರಂದು ಬೆಳಗ್ಗೆ 10ಕ್ಕೆ ಬೆಳಗಾವಿಯ ಸುವರ್ಣ ಸೌಧಕ್ಕೆ ಸಾವಿರಾರು ಜನ ಪಂಚಮಸಾಲಿಗರು ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ವಕೀಲರ ಪರಿಷತ್ ನೇತೃತ್ವದಲ್ಲಿ ಅಂದು ನಡೆಯುವ ಹೋರಾಟದಲ್ಲಿ ಪಂಚಮಸಾಲಿ ಸಮುದಾದಯದ ಸುಮಾರು 15 ಸಾವಿರಕ್ಕೂ ಅಧಿಕ ಜನರು ಭಾಗವಹಿಸುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಈಗಾಗಲೇ ಸಿಎಂಗೆ ಕೊಟ್ಟ ಸಮಯ ಮುಗಿದಿದೆ. ಎಲ್ಲರೂ ಸೇರಿ ಮುತ್ತಿಗೆ ಹಾಕುವುದಕ್ಕಾಗಿ ನಿರ್ಧರಿಸಿದ್ದೇವೆ. ಯಾವುದೇ ಒತ್ತಡಕ್ಕೂ ಈಗ ಮಣಿಯುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಭೆ ನಡೆಸಿದ್ದೇವೆ. ನೀತಿ ಸಂಹಿತೆ ಕಾರಣದಿಂದ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ ಎಂದಿದ್ದರು. ಲಿಂಗಾಯತರು ವೋಟು ಹಾಕಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರ ಮೂಲಕ ಸರ್ಕಾರವು ಈ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ, ನಾವು ಯಾವುದಕ್ಕೂ ಅಂಜುವುದಿಲ್ಲ ಎಂದಿದ್ದಾರೆ.