ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳನ್ ರನ್ನು ಪಕ್ಷದಿಂದ ಉಚ್ಛಾಟಿಸಿದ್ದಕ್ಕೆ ಬೀದಿಗಿಳಿದು ಪಂಚಮಸಾಲಿಗರು ಪ್ರತಿಭಟನೆ ನಡೆಸಿದ್ದಾರೆ.
ಯತ್ನಾಳ್ ರನ್ನು ಉಚ್ಛಾಟಿಸಿದ್ದಕ್ಕೆ ಯಲಬುರ್ಗಾ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಯಡಿಯೂರಪ್ಪ, ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹಲವಾರು ಮುಖಂಡರು ಭಾಗಿಯಾಗಿದ್ದರು.