ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಈ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪಂಡಿತ್ ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿ 5 ಲಕ್ಷ ರೂ., ಸ್ಮರಣಿಕೆ ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಸೆ.22ರಂದು ಮೈಸೂರಿನ ಅರಮನೆಯ ಮುಂಭಾಗ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಡಾ| ವೈ. ಕೆ. ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.