ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಗ್ರಾಮದ ಕೆರೆಯೊಂದರಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. 18 ವರ್ಷದ ಮಹಾಲಕ್ಷ್ಮಿ ಸಾವನ್ನಪ್ಪಿದ ವಿದ್ಯಾರ್ಥಿನಿ ಎನ್ನಲಾಗಿದೆ.
ಮಹಾಲಕ್ಷ್ಮೀ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರಿನ ಅಂಬರಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಡದಲ್ಲಿ ಮೊಬೈಲ್, ಐಡಿ ಕಾರ್ಡ್ ಇಟ್ಟು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚನ್ನಪಟ್ಟಣದ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.