ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ತಡರಾತ್ರಿಯೇ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸದ ಪರಮೇಶ್ವರ್, ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೆ.ಸಿ. ವೇಣುಗೋಪಾಲ್ ಮುಂದೆ ಸಾಲು ಸಾಲು ವಿಚಾರಗಳನ್ನು ಪ್ರಸ್ತಾಪ ಮಾಡಿರುವ ಪರಮೇಶ್ವರ್, ಮೊದಲಿಗೆ ಸಮಾವೇಶ ಮಾಡುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಬದಲಾವಣೆ ಮಾಡುವ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿ ಒಂದು ಹುದ್ದೆ ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.