ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ಸಂಬಂಧ ನಟ ದರ್ಶನ್, ಪವಿತ್ರಾ ಸೇರಿ ಏಳು ಮಂದಿ ಆರೋಪಿಗಳು ಮತ್ತೆ ಜೈಲು ಸೇರಿದ್ದಾರೆ. ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ದಿನಗಳನ್ನು ಕಳೆಯುತ್ತಿರುವ ದರ್ಶನ್‌ಗೆ ಬಳ್ಳಾರಿಗೆ ಶಿಫ್ಟ್ ಮಾಡುವಂತೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರಿಂದ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಈ ಬಗ್ಗೆ ಇಂದು ವಿಚಾರಣೆ ನಡೆಸಲಾಗುವುದು. ಈ ಹಿಂದೆ ಐವರು ಆರೋಪಿಗಳನ್ನು ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಜೈಲು ಅಧಿಕಾರಿಗಳ ಪರವಾಗಿ ಎಸ್‌ಪಿಪಿ ಸಲ್ಲಿಕೆ ಮಾಡಿದ್ದರು. ಇದೀಗ 64ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತದೆ.



















