ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ (Parasurama Theme Park) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿಲ್ಪಿ ಕೃಷ್ಣ ನಾಯಕ್ನನ್ನು (45) ಬಂಧಿತ ವ್ಯಕ್ತಿ. ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವುರು ದೂರು ನೀಡಿದ್ದರು. ಕೃಷ್ಣಶೆಟ್ಟಿ ಅವರ ದೂರು ಆಧರಿಸಿ ಶಿಲ್ಪಿ ಕೃಷ್ಣ ನಾಯಕ್ ಎಂಬ ವ್ಯಕ್ತಿಯನ್ನು ಕಾರ್ಕಳ ಪೊಲೀಸರು ಅರೆಸ್ಟ್ ಆಗಿದ್ದಾರೆ.
ಕೃಷ್ಣ ನಾಯಕ್ ಉಡುಪಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ತಿರಸ್ಕಾರದ ಬೆನ್ನಲ್ಲೇ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಈಗ ಪೊಲೀಸರು ಪತ್ತೆ ಹಚ್ಚೆ ವಶಕ್ಕೆ ಪಡೆದಿದ್ದಾರೆ.
ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಆರೋಪ ಕೇಳಿ ಬಂದಿದೆ. ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ.
ಹಿತ್ತಾಳೆ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ನಂತರ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿದ್ದ ಪರಶುರಾಮನ ಮೂರ್ತಿ ಏಕಾಏಕಿ ಕಾಣೆಯಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ಕೇಳಿ ಬಂದಿತ್ತು. ತನಿಖೆಯ ಭಾಗವಾಗಿ ಈಗ ಸಿಲ್ಪಿಯನ್ನು ವಶಕ್ಕೆ ಪಡೆಯಲಾಗಿದೆ.