ಉಡುಪಿ / ಬೆಂಗಳೂರು : ಕರ್ನಾಟಕ ಹೈಕೋರ್ಟ್ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಪ್ರತಿಮೆಯನ್ನು ಮರು ಸ್ಥಾಪಿಸಲು ನಿರ್ದೇಶಿಸುವಂತೆ ಕೋರಿ ಉಡುಪಿಯ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ.
ಈ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ವಿಭು ಬಬ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ನಡೆಸಿ ಅರ್ಜಿದಾರರ ಪರ ವಕೀಲರು ಈ ಮೊದಲೇ ನ್ಯಾಯಾಲಯದ ನಿರ್ದೇಶನದಂತೆ 5 ಲಕ್ಷ ರೂ ಠೇವಣಿ ಇಟ್ಟಿರುವುದನ್ನು ದಾಖಲಿಸಿಕೊಂಡ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಲ್ಲದೇ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿ ಆದೇಶಿಸಿದೆ.