ಉಡುಪಿ : ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಬಂಧಿತರು. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ.
ಪ್ರತಿಮೆಯ ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಯೋಜನಾ ಸ್ಥಳವನ್ನು ಮುಚ್ಚಲಾಗಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದ ದುಷ್ಕರ್ಮಿಗಳು, ಪರಶುರಾಮ ಸನ್ನಿಧಾನದ ಮೇಲ್ಚಾವಣಿಯಿಂದ ತಾಮ್ರದ ತಗಡುಗಳನ್ನು ಎಗರಿಸಿದ್ದರು. ಜನವರಿ 3ರಂದು ಘಟನೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು 3 ತಂಡ ರಚಿಸಿ ತನಿಖೆ ನಡೆಸಿದ್ದರು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : 2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!



















