ಬೆಂಗಳೂರು: ಬಲವಂತವಾಗಿ ಮದುವೆ ಮಾಡಲು ಪೋಷಕರು ಮುಂದಾಗಿದ್ದಕ್ಕೆ ಮನನೊಂದ ಕಾಲೇಜು ವಿದ್ಯಾರ್ಥಿನಿ ಪಿಜಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಡಿವಾಳದಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಚಿತ್ರಾ (24) ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿಧ್ಯಾರ್ಥಿನಿ. ಈಕೆ ಡಿಗ್ರಿ ಮುಗಿಸಿ ಕಂಪ್ಯೂಟರ್ ಕೋರ್ಸ್ ಮಾಡಲು ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ಇದರ ನಡುವೆ ಸುಚಿತ್ರಾಗೆ ಮದುವೆ ಮಾಡಲು ಮನೆಯಲ್ಲಿ ಸಿದ್ದತೆ ನಡೆಸುತ್ತಿದ್ದರು. ಇದರಿಂದ ಬೇಸಗೊಂಡ ಯುವತಿ ಇದೀಗಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸುಚಿತ್ರಾ ಮನೆಯ ಸಮಸ್ಯೆ ಹಾಗೂ ತನ್ನ ಅಕ್ಕನ ದಾಂಪತ್ಯ ಜೀವನದಲ್ಲಿ ಬರೀ ಜಗಳ ನೋವುಗಳನ್ನೆ ಕಂಡಿದ್ದಳು, ಇದರ ನಡುವೆ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಇದರಿಂದ ಮನನೊಂದ ಸುಚಿತ್ರಾ, ಈ ಎಲ್ಲಾ ವಿಚಾರವನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಸ್ಥಳಕ್ಕೆ ಪೊಲೀಸರು ಭೆಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ | ವಾರವಾದ್ರು ಆರೋಪಿಯನ್ನು ಬಂಧಿಸಿಲ್ಲ ಎಂದು ಹೆತ್ತವರ ಆಕ್ರೋಶ



















