ಚಾಮರಾಜನಗರ : ಪೋಷಕರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ.
ನಾಗೇಂದ್ರ ಗ್ರಾಮದ ನದಿಯಾಳನ್ನು ಪ್ರೀತಿಸುತ್ತಿದ್ದನು. ಇವರ ಮದುವೆಗೆ ಎರಡು ಮನೆಯವರು ಒಪ್ಪಿರಲಿಲ್ಲ. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮೂರು ದಿನಗಳ ಹಿಂದೆ ಮನೆಬಿಟ್ಟು ಹೋಗಿತ್ತು.
ನಾಗೇಂದ್ರ, ನದಿಯಾಳನ್ನು ಕರೆದುಕೊಂಡು ತನ್ನ ಅಜ್ಜನ ಊರು ಪೊನ್ನಾಚಿಗೆ ಹೋಗಿದ್ದ. ಇತ್ತ ನದಿಯಾ ಕುಟುಂಬಸ್ಥರು ಆತಂಕಗೊಂಡಿದ್ದು, ಎಲ್ಲೆಡೆ ಹುಡುಕಾರಿದ್ದಾರೆ. ಆದರೂ ಪತ್ತೆಯಾಗಿಲ್ಲ. ಕೊನೆಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.
ಕೇಸ್ ದಾಖಲಾದ ವಿಚಾರ ನಾಗೇಂದ್ರ ಹಾಗೂ ನದಿಯಾಗೆ ಗೊತ್ತಾಗಿ ಹೆದರಿಕೊಂಡಿದ್ದು, ಸಾಯುವ ನಿರ್ಧಾರಕ್ಕೆ ಬಂದಿದ್ದು, ಅಜ್ಜನ ಮನೆಯಲ್ಲಿ ಯಾರು ಇಲ್ಲದ ವೇಳೆ ಇಬ್ಬರು ಒಟ್ಟಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಲೆ ಮಹದೇಶ್ವರಬೆಟ್ಟ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಇದನ್ನೂ ಓದಿ : ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!


















