33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತ ಪದಕವನ್ನು ಕೊರಳಿಗೆ ಹಾಕಿಕೊಂಡಿದೆ.
ಈ ಮೂಲಕ ಭಾರತದ ಪದಕ ಬೇಟೆ ಆರಂಭವಾಗಿದೆ. ಭಾರತವು ಕಂಚಿನ ಪದಕದ ಮೂಲಕ ತನ್ನ ಪದಕದ ಖಾತೆ ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
ಇಂದು ನಡೆದ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಅವರು ಕಂಚಿನ ಪದಕ ಗೆದ್ದಿದ್ದಾರೆ. ದಕ್ಷಿಣ ಕೊರಿಯಾದ ಆಟಗಾರರಿಗೆ ಭಾರೀ ಪೈಪೋಟಿ ನೀಡುವ ಮೂಲಕ ಮನು ಭಾಕರ್ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
