ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯರ ಕನಸು ನನಸು ಮಾಡುವತ್ತ ದಾಪುಗಾಲಿಟ್ಟಿದ್ದಾರೆ.
ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಸೆಮಿಫೈನಲ್ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ ನೈಲೆಸ್ ಗುಜ್ಮನ್ ಎದುರು 5-0 ಅಂತರದಿಂದ ಭರ್ಜರಿಯಾಗಿ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ.
ಈ ಮೂಲಕ ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಭಾರತಕ್ಕೆ ಕುಸ್ತಿ ವಿಭಾಗದಲ್ಲಿ ಒಂದು ಪದಕ ಖಾತ್ರಿ ಮಾಡಿದ್ದಾರೆ. ವಿನೇಶ್ ಅವರು ಮಂಗಳವಾರ ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್ ಅವರನ್ನು 5-0 ಅಂತರದಿಂದ ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಫೈನಲ್ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕದ ಸಾಧನೆಗೆ ವಿನೇಶ್ ಪಾತ್ರರಾಗಲಿದ್ದಾರೆ. ವಿನೇಶ್ 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್ ಆಡುತ್ತಿರುವುದು ಇದೇ ಮೊದಲ ಬಾರಿಗೆ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್ ಅವರ ಮೂರನೇ ಒಲಿಂಪಿಕ್ಸ್ ಪಂದ್ಯವಾಗಿದೆ. ಆದರೆ, ಈ ಬಾರಿ ಫೈನಲ್ ಪ್ರವೇಶಿಸುವ ಮೂಲಕ ಭಾರತದ ಮತ್ತೊಂದು ಪದಕದ ಕನಸು ನನಸು ಮಾಡಿದ್ದಾರೆ.