ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡೆಗೆ ಇಂದು ತೆರೆ ಬೀಳಲಿದೆ. ಸಮಾರೋಪ ಸಮಾರಂಭದಲ್ಲಿ ಎಲ್ಲ ದೇಶಗಳ ಆಯ್ದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಭಾರತೀಯ ಕಾಲಮಾನ 12.30 AM ಗೆ ಶುರುವಾಗಲಿರುವ ಈ ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿ ಹಾಕಿ ತಂಡದ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಹಾಗೂ ಶೂಟರ್ ಮನು ಭಾಕರ್ ಕಾಣಿಸಿಕೊಳ್ಳಲಿದ್ದಾರೆ.
ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್ ಗಳು, ನೃತ್ಯಗಾರರು ಮತ್ತು ಸರ್ಕಸ್ ಕಲಾವಿದರು ಕೂಡ ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಗೀತ ಪ್ರದರ್ಶನಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ವಿದಾಯಕ್ಕೆ ಸಾಕ್ಷಿಯಾಗಲಿವೆ.
ಆದರೆ, ಈ ಒಲಿಂಪಿಕ್ಸ್ ನಲ್ಲಿ ಭಾರತದ ಅಭಿಯಾನ ಶನಿವಾರವೇ ಅಂತ್ಯವಾಗಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿರುವುದು ಭಾರತದ ಸರ್ವಶ್ರೇಷ್ಠ ಸಾಧನೆ. ಶೂಟಿಂಗ್ ನಲ್ಲಿ ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತವು ಈ ಬಾರಿ ಒಟ್ಟು 6 ಪದಕಗಳೊಂದಿಗೆ ಅಭಿಯಾನ ಮುಗಿಸಿದೆ. ಪದಕ ಪಟ್ಟಿಯಲ್ಲಿ ಅಮೆರಿಕ ಹಾಗೂ ಚೀನಾ ಮಧ್ಯೆ ಪೈಪೋಟಿ ನಡೆದಿದೆ. ಈಗಾಗಲೇ ಅಮೆರಿಕ 122ಕ್ಕೂ ಅಧಿಕ ಅಂಕ ಪಟ್ಟಿಗಳನ್ನು ಗೆದ್ದು ಎರಡನೇ ಸ್ಥಾನದಲ್ಲಿದ್ದರೆ, 88 ಒಟ್ಟು ಪದಕ ಗೆದ್ದು, ಚಿನ್ನದಲ್ಲಿ ಅತೀ ಹೆಚ್ಚು ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ಟೋಕಿಯೋ ಒಲಿಂಪಿಕ್ಸ್ ನಲ್ಲಿ 7 ಪದಕಗಳನ್ನು ಗೆದ್ದ ಸಾಧನೆ ಮಾಡಿತ್ತು. ಅಲ್ಲದೇ, ಒಂದು ಚಿನ್ನದ ಪದಕ ಗೆದ್ದಿತ್ತು. ಆದರೆ, ಈ ಬಾರಿ ಭಾರತಕ್ಕೆ ಚಿನ್ನದ ಪದಕ ಸಿಗಲೇ ಇಲ್ಲ.
ಮನು ಭಾಕರ್: ಮಹಿಳೆಯರ 10 ಮೀ ಏರ್ ಪಿಸ್ತೂಲ್- ಕಂಚು
ಮನು ಭಾಕರ್, ಸರಬ್ಜೋತ್ ಸಿಂಗ್: 10 ಮೀ ಏರ್ ಪಿಸ್ತೂಲ್ (ಮಿಶ್ರ ತಂಡ)- ಕಂಚು
ಸ್ವಪ್ನಿಲ್ ಕುಸಾಲೆ: 50 ಮೀ ರೈಫಲ್ 3 ಸ್ಥಾನ- ಕಂಚು
ಟೀಮ್ ಇಂಡಿಯಾ: ಪುರುಷರ ಹಾಕಿ- ಕಂಚು
ನೀರಜ್ ಚೋಪ್ರಾ: ಪುರುಷರ ಜಾವೆಲಿನ್ ಥ್ರೋ- ಬೆಳ್ಳಿ
ಅಮನ್ ಸೆಹ್ರಾವತ್: ಪುರುಷರ ಕುಸ್ತಿ ಫ್ರೀಸ್ಟೈಲ್ 57 ಕೆ.ಜಿ- ಕಂಚು ಈ ಬಾರಿ ಪದಕ ಗೆದ್ದ ಭಾರತೀಯ ಸಾಧಕರಾಗಿದ್ದಾರೆ.