ಮೈಸೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಆರಂಭವಾಗಿದ್ದು, ಇಡಿ ಕೂಡ ತನಿಖೆ ನಡೆಸುತ್ತಿದೆ. ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಅವರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. 2ನೇ ಆರೋಪಿಯಾಗಿರುವ ಬಿ.ಎಂ.ಪಾರ್ವತಿ ಲೋಕಾಯುಕ್ತ ನೋಟಿಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದರು.
ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ವಿಚಾರಣೆಗೆ ಹಾಜರಾಗಿದ್ದಾರೆ. ಮೈಸೂರು ಲೋಕಾಯುಕ್ತ ಪೊಲೀಸರು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಹೀಗಾಗಿ ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಕರೆಸಿ ಮೈಸೂರು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈಗ A1 ಸಿಎಂ ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ ಉಳಿದಿದ್ದು, ಎಲ್ಲರ ಚಿತ್ರ ಇತ್ತ ನೆಟ್ಟಿದೆ.