ಬೆಂಗಳೂರು: EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಮನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ಪಾರು ಪಾರ್ವತಿ ಸಿನಿಮಾ ಓಟಿಟಿ ಪ್ರವೇಶಿಸಿದೆ.
ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್ ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “#ಪಾರು ಪಾರ್ವತಿ” ಚಿತ್ರ ಈಗಾಗಲೇ ಚಿತ್ರ ಮಂದಿರಗಳಲ್ಲಿ ಪ್ರದರ್ಶನಗೊಂಡು ಓಟಿಟಿ ಪ್ರವೇಶ ಮಾಡುತ್ತಿದೆ.

ಈ ಚಿತ್ರ ಜ. 31ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಸಿನಿಮಾ ಇದೀಗ ಅಮೆಜಾನ್ ಪ್ರೈಂ ವಿಡಿಯೋ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಆರಂಭದಲ್ಲಿ ಈ ಚಿತ್ರದ ಟ್ರೇಲರ್ ನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದರು. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಮೆಚ್ಚುಗೆಯೂ ಸಿಕ್ಕಿತ್ತು. ಓಟಿಟಿಯಲ್ಲಿ ಕಣ್ತುಂಬಿಕೊಳ್ಳುವ ಸಮಯ ಬಂದಿದೆ.
ಪ್ರವಾಸ ಕಥನದ ಹಿನ್ನೆಲೆಯ “#ಪಾರು ಪಾರ್ವತಿ” ಸಿನಿಮಾವನ್ನು ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಕಾಂಡ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಬಿನ್ ರಾಜೇಶ್ ಛಾಯಾಗ್ರಹಣ, ಆರ್ ಹರಿ ಸಂಗೀತ ನಿರ್ದೇಶನ ಹಾಗೂ ಸಿ.ಕೆ.ಕುಮಾರ ಅವರ ಸಂಕಲನ “#ಪಾರು ಪಾರ್ವತಿ” ಚಿತ್ರಕ್ಕಿದೆ.


















