ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥರಾದ ಕಾರಣ ಚಿಕಿತ್ಸೆಗಾಗಿ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.
ಇಂದು (ಜ.12) ಬೆಳಗ್ಗೆ ಹೊರಟಿದ್ದ AI2517 ವಿಮಾನದಲ್ಲಿ ವಯಸ್ಸಾದ ಪ್ರಯಾಣಿಕರೊಬ್ಬರು ಅಸ್ವಸ್ಥರಾದರು. ನಂತರ ವಿಮಾನವನ್ನು ಜೈಪುರಕ್ಕೆ ತಿರುಗಿಸಲಾಯಿತು. ಅಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳ ದೊರೆತಿಲ್ಲ. ಅಲ್ಲದೇ ತುರ್ತು ಭೂಸ್ಪರ್ಶದ ಬಗ್ಗೆ ಏರ್ ಇಂಡಿಯಾ ಸಂಸ್ಥೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಇದನ್ನೂ ಓದಿ : ಚನ್ನಪಟ್ಟಣದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿ ಎಂದು ಬ್ಯಾನರ್ ಹಾಕಿದ ಅಭಿಮಾನಿಗಳು



















