ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರು ಪಥ ಸಂಚಲನೆ ನಡೆಸಿದ್ದಾರೆ. ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಫೋಟೋ ಹಿಡಿದು ನಡೆದರು.
ಸಂಪ್ರದಾಯದಂತೆ ಕಾಂಗ್ರೆಸ್ ಸೇವಾದಳದ ಕಾರ್ಯಕರ್ತರು ಮುಂದೆ ಸಾಗಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಅಲ್ಲದೇ, ನಗರದ ಟಿಳಕವಾಡಿಯಲ್ಲಿನ ವೀರ ಸೌಧದಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ನೂತನ ಪ್ರತಿಮೆಯನ್ನು ಸಿಎ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಂತರ ‘ಗಾಂಧಿ ಭಾರತ’ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ವೀರಸೌಧದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು. ವೀರಸೌಧ ಆವರಣ ಪ್ರವೇಶಿಸಿದ ಬಳಿಕ ಒಳಗೆ ಕಾಂಗ್ರೆಸ್ ಧ್ವಜಾರೋಹಣವನ್ನು ಮಲ್ಲಿಕಾರ್ಜುನ ಖರ್ಗೆ ನೆರವೇರಿಸಿದರು. ಪ್ರತಿಯೊಬ್ಬರಿಗೂ ಸಿಎಂ ಮತ್ತು ಡಿಸಿಎಂ ವಿಶೇಷ ರೇಷ್ಮೆ ಶಾಲು ಹಾಕಿ ಸ್ವಾಗತಿಸಿದರು.