ಕಿಚ್ಚ ಸುದೀಪ್ ಅವರ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ. ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಇಡೀ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು, ಕಿರುತೆರೆ ಕಲಾವಿದರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ಈ ವೇಳೆ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ನಟ ಪವನ್ ಕಲ್ಯಾಣ್ ಅವರು ಕನ್ನಡದಲ್ಲಿ ಸಂತಾಪದ ನುಡಿ ಹಂಚಿಕೊಂಡಿದ್ದಾರೆ. ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಕಚೇರಿ’ ಎಕ್ಸ್ (ಟ್ವಿಟರ್) ಖಾತೆ ಮೂಲಕ ಪವನ್ ಕಲ್ಯಾಣ್ ಅವರು ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಸುದೀಪ್ ಅವರ ಕುಟುಂಬಕ್ಕೆ ಸಂತಾಪಗಳು. ಖ್ಯಾತ ನಟ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಪವನ್ ಕಲ್ಯಾಣ್ ಬರೆದುಕೊಂಡಿದ್ದಾರೆ.
ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹ ಇದೆ ಎಂದು ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು’ ಎಂದು ಪವನ್ ಕಲ್ಯಾಣ್ ಅವರು ಬರಹ ಪೂರ್ಣಗೊಳಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಸುದೀಪ್ಗೆ ಸಂತಾಪದ ನುಡಿಗಳನ್ನು ತಿಳಿಸಿದ್ದಾರೆ. ಬಸವರಾಜ ಬೊಮ್ಮಾಯಿ, ಶಿವರಾಜ್ಕುಮಾರ್ ಮುಂತಾದವರು ಸರೋಜಾ ಸಂಜೀವ್ ಅವರಿಗೆ ಅಂತಿಮ ನಮನ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.