ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾಗಿಯಾಗಲಿದ್ದಾರೆ. ವಿಶೇಷ ವಿಮಾನದ ಮೂಲಕ ಅವರು ಮಂಗಳೂರಿಗೆ ಆಗಮಿಸಿ ಉಡುಪಿ ತಲುಪಿದ್ದಾರೆ.
ಪರ್ಯಾಯ ಪುತ್ತಿಗೆ ಮಠಾಧೀಶರ ನೇತೃತ್ವದಲ್ಲಿ ಗೀತೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ತಿಂಗಳ ಹಿಂದೆ ಪೇಜಾವರ ಸ್ವಾಮೀಜಿ ಉದ್ಘಾಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂದು ಗೀತೋತ್ಸವದ ಸಮಾರೋಪ ಸಮಾರಂಭಕ್ಕೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಊಟ ಮುಗಿಸಿ ಅವರು ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಮಾಡಿ ಸ್ವಾಮೀಜಿಗಳ ಜೊತೆ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ನಂತರ ಮಠದ ರಾಜಾಂಗಣದಲ್ಲಿ ನಡೆಯುವ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು.
ಇದನ್ನೂ ಓದಿ : ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ | 7 ದಿನದ ಮಗುವನ್ನು ಬಿಟ್ಟು ದಂಪತಿ ಆತ್ಮಹತ್ಯೆ!



















