ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಜ (30) ಎಂದು ಗುರುತಿಸಲಾಗಿದೆ. ರಾಜ ಅವರು ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಪಲ್ಸರ್ 200 ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬೈಕ್ ಸವಾರ ಮಾರಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂಬದಿ ಸವಾರ ನಂದೀಶ್ ಅವರನ್ನು ಮಾನ್ವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಮೃತ ರಾಜ ಅವರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಆತ್ಮಹತ್ಯೆ!



















