ದಾವಣಗೆರೆ : ಜಿಲ್ಲೆಯ ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಪ್ರದೇಶದಲ್ಲಿ ಮಕ್ಕಳ ಕಳ್ಳ ಎಂದು ಶಂಕಿಸಿ ಮಾನಸಿಕ ಅಸ್ವಸ್ಥ ಯುವಕನ ಮೇಲೆ ಸಾರ್ವಜನಿಕರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಕ್ಕಳನ್ನು ಕಳವು ಮಾಡಲು ಯತ್ನಿಸಿದ್ದಾನೆ ಎಂಬ ಅನುಮಾನದಿಂದ ಜನರು ಆತನ ಮೇಲೆ ದಾಳಿ ನಡೆಸಿದ್ದಾರೆ.
ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಚರ್ಚೆ ನಡೆಯುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೊನ್ನಾಳಿ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಹಲ್ಲೆಗೊಳಗಾದ ಯುವಕನನ್ನು ತಕ್ಷಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದೆ. ಸದ್ಯ ಪೊಲೀಸರು ಚಿಕಿತ್ಸೆ ಕೊಡಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : 5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!


















