ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಗರದ ಔಟರ್ ರಿಂಗ್ ರಸ್ತೆಯಲ್ಲಿ ಪುಂಡರು ವ್ಹೀಲಿಂಗ್ ಮಾಡಿ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ನಾಗರಬಾವಿ ರಿಂಗ್ ರಸ್ತೆಯಲ್ಲಿ ಮೂರ್ನಾಲ್ಕು ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡಿದ್ದಾರೆ.
ಪುಂಡರು ತಡರಾತ್ರಿಯವರೆಗೆ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಈ ವ್ಹೀಲಿಂಗ್ ಪುಂಡರ ಹಾವಳಿಯಿಂದಾಗಿ ವಾಹನ ಸಾವರು ಹೈರಾಣಾಗಿದ್ದಾರೆ. ಸಾರ್ವಜನಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸಾರ್ವಜನಿಕರು ಈ ಕೃತ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.