ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ.
ಆರ್ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ. ಯಾವುದೇ ತಯಾರಿ ಮಾಡಿಕೊಳ್ಳದೇ ಈ ಕಾರ್ಯಕ್ರಮ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮುಖ್ಯಮಂತ್ರಿಗಳು ಒತ್ತಾಯ ಮಾಡಿ ಕಾರ್ಯಕ್ರಮ ಮಾಡಿದ್ದಾರೆ. ಹೆಣ್ಣುಮಕ್ಕಳಿಗೆ ಯಾವುದೇ ಭದ್ರತೆ ಇರಲಿಲ್ಲ. ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ. ಅಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.