ಮಂಡ್ಯ: ಕ್ಷುಲ್ಲುಕ ಕಾರಣಕ್ಕೆ ಅಕ್ಕ ಪಕ್ಕದ ಮನೆಯವರು ಬಡಿಗೆ ಹಿಡಿದುಕೊಂಡು ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರಿನ ಚಾಮನಹಳ್ಳಿಯಲ್ಲಿ ನಡೆದಿದೆ.
ಚಾಮನಹಳ್ಳಿಯ ತಮಿಳು ನಿವಾಸಿಗಳು ಹೊಡೆದಾಡಿಕೊಂಡಿದ್ದಾರೆ. ಅಲ್ಲದೇ, ಕೈಗೆ ಸಿಕ್ಕ ವಸ್ತುಗಳಿಂದ ಪರಸ್ಪರ ಬಡಿದಾಡಿಕೊಂಡು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಹೊಡೆದಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















