ಬೆಂಗಳೂರು: ಬೆಂಗಳೂರಿನ ರಾಜಾಜಿನಗರದಲ್ಲಿ ಸಾಕು ನಾಯಿಯೊಂದು 11 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಸೈಕಲ್‌ನಲ್ಲಿ ಆಟವಾಡುತ್ತಿದ್ದ ಬಾಲಕನಿಗೆ ನಾಯಿ ಕಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದ್ದು, ಘಟನೆ ಭಯ ಹುಟ್ಟಿಸಿದೆ.
ಈ ಘಟನೆ ರಾಜಾಜಿನಗರದ 19ನೇ ಎ ಮುಖ್ಯರಸ್ತೆಯಲ್ಲಿ ಮಾರ್ಚ್ 21ರಂದು ನಡೆದಿದ್ದು, ತಡವಾಗಿ ಬಹಿರಂಗವಾಗಿದೆ. ಗಾಯಗೊಂಡ ಬಾಲಕನ ತಾಯಿ ರಾಧಿಕ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಯಿ ಮಾಲೀಕರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ. ಘಟನೆ ನಡೆದ ತಕ್ಷಣ ಸರಿಯಾದ ಸ್ಪಂದನೆ ದೊರಕಲಿಲ್ಲ ಎಂಬುದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ – ಪತಿ ಅರೆಸ್ಟ್


















